ಇಸ್ಲಾಮಾಬಾದ್, ಜ.31: ಪೇಶಾವರದ ಪೊಲೀಸ್ ಲೈನ್ಸ್ ನ ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಮಂಗಳವಾರ 72ಕ್ಕೆ ಏರಿಕೆಯಾಗಿದೆ.
ಮಸೀದಿಯ ಸೆಂಟ್ರಲ್ ಹಾಲ್ ನಲ್ಲಿ ಸೋಮವಾರ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಪ್ರಾರ್ಥನಾ ಸ್ಥಳದ ಮೇಲ್ಛಾವಣಿ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ಈತ ಮೊದಲ ಸಾಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ದಾಳಿಯ ಹೊಣೆ ಹೊತ್ತುಕೊಂಡಿದೆ.