ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 13 ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡವನ್ನು ಆವರಿಸಿದ ಮಾರಣಾಂತಿಕ ಬೆಂಕಿಯಿಂದ ಪಾರಾಗಲು 11 ನೇ ಮಹಡಿಯಿಂದ ಜಿಗಿದ ಘಟನೆಯಲ್ಲಿ ನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್‌ಪೋಸ್ಟ್‌ನ ಮುಖ್ಯಸ್ಥ ಬಚ್ಚು ಮಿಯಾ ವ್ಯಕ್ತಿಯ ಮೃತದೇಹ ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಲುಪಿದೆ” ಎಂದು ಹೇಳಿದರು.
ಬೆಂಕಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಕಟ್ಟಡದಿಂದ ಜಿಗಿದ ನಾಲ್ವರಲ್ಲಿ ಓರ್ವ ವನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನೂ ಮೂವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕಟ್ಟಡದ 6 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಕಿಯು ಇತರ ಮಹಡಿಗಳನ್ನು ಆವರಿಸಿತು.
ರಾತ್ರಿ 7ರ ಸುಮಾರಿಗೆ ಹೊತ್ತಿಕೊಂಡ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನಾಲ್ಕು ಗಂಟೆಗಳ ನಿರಂತರ ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತಂದರು.
ಢಾಕಾದ ರಾಜತಾಂತ್ರಿಕ ಪ್ರದೇಶವಾದ ಗುಲ್ಶನ್‌ನಲ್ಲಿರುವ ಕಟ್ಟಡದಿಂದ ಕನಿಷ್ಠ 22 ಜನರನ್ನು ಸ್ಥಳಾಂತರಿಸಲಾಗಿದೆ.