ಬೀಜಿಂಗ್: ಚೀನಾದ ಜಿಯಾಂಗ್ಸು ಪ್ರಾಂತ್ಯದ ಎರಡು ಟೌನ್‌ಶಿಪ್‌ಗಳಿಗೆ ಸುಂಟರಗಾಳಿ ಅಪ್ಪಳಿಸಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸುಕಿಯಾನ್ ನಗರದ ಡಾಕ್ಸಿಂಗ್ ಟೌನ್‌ಶಿಪ್ ಮತ್ತು ನಂಕೈ ಟೌನ್‌ಶಿಪ್ ಗೆ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಸುಂಟರಗಾಳಿ ಅಪ್ಪಳಿಸಿದೆ. ಇದರಿಂದ ಸುಮಾರು 5,512 ಜನರು ಬಾಧಿತರಾಗಿದ್ದು, 1,646 ಮನೆಗಳು ಹಾನಿಗೊಳಗಾಗಿವೆ ಮತ್ತು 137 ಮನೆಗಳು ಕುಸಿದಿವೆ. ಒಟ್ಟು 41.8 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 405 ಜನರನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ನಗರದ ತುರ್ತು ನಿರ್ವಹಣಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚೀನಾದಲ್ಲಿ ಭಯಾನಕ ಸುಂಟರಗಾಳಿಯಿಂದ 5 ಮಂದಿ ಸಾವು

Photo Credit :
IANS
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.