News Karnataka Kannada
Thursday, March 28 2024
Cricket
ವಿದೇಶ

ಇಸ್ಲಾಮಾಬಾದ್: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ

Islamabad: Former Pakistan Prime Minister Imran Khan has been arrested.
Photo Credit : IANS

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ ಆವರಣದಿಂದ ಬಂಧಿಸಲಾಗಿದೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಖಾನ್‌ ತಮ್ಮ ವಿರುದ್ಧ ದಾಖಲಾದ ಅನೇಕ ಎಫ್‌ಐಆರ್‌ಗಳಲ್ಲಿ ಜಾಮೀನು ಪಡೆಯಲು ಹೋಗಿದ್ದ ವೇಳೆ ನ್ಯಾಯಾಲಯದ ಕೊಠಡಿಯಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಈ ಬೆಳವಣಿಗೆಯನ್ನು ಪಿಟಿಐ ವಕೀಲ ಫೈಸಲ್ ಚೌಧರಿ ಖಚಿತಪಡಿಸಿದ್ದಾರೆ. ಆದರೆ ಪಕ್ಷದ ಉಪಾಧ್ಯಕ್ಷ ಫವಾದ್ ಚೌಧರಿ ಅವರು ನ್ಯಾಯಾಲಯವನ್ನು “ರೇಂಜರ್‌ಗಳು ಆಕ್ರಮಿಸಿಕೊಂಡಿದ್ದಾರೆ” ಮತ್ತು ತಮ್ಮ ಪರ ವಕೀಲರು “ಚಿತ್ರಹಿಂಸೆಗೆ ಒಳಗಾಗುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ ಎಂದು ಡಾನ್ ವರದಿ ಮಾಡಿದೆ.

ಈ ನಿಟ್ಟಿನಲ್ಲಿ ಪಕ್ಷವು ದೇಶದಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದೆ. ಪಿಟಿಐನ ಅಧಿಕೃತ ಟ್ವಿಟ್ಟರ್ ಖಾತೆಯು ಇಮ್ರಾನ್ ಅವರ ವಕೀಲರ ವೀಡಿಯೊವನ್ನು ಹಂಚಿಕೊಂಡಿದೆ. ಅಲ್ಲದೆ ನ್ಯಾಯಾಲಯ ಹೊರಗಿನ ಆವರಣದಲ್ಲಿ ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದೆ. ಏತನ್ಮಧ್ಯೆ, ರಾಜಧಾನಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ಇಸ್ಲಾಮಾಬಾದ್ ಪೊಲೀಸರು ತಿಳಿಸಿದ್ದಾರೆ ಮತ್ತು ಯಾರಿಗೂ ಚಿತ್ರಹಿಂಸೆ ನೀಡಿಲ್ಲ ಎಂದು ಖಚಿತಪಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು