ಬೆಲ್ಗ್ರೇಡ್: ಸರ್ಬಿಯಾದ ಪ್ರಾಥಮಿಕ ಶಾಲೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಬುಧವಾರ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ಮತ್ತು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
ಆಂತರಿಕ ಸಚಿವಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ವ್ರಕಾರ್ ಪುರಸಭೆಯ ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಿಗ್ಗೆ 8.40 ಗಂಟೆಗೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರಿಗೆ ತಿಳಿಸಲಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಘಟನೆಗೆ ಸಂಬಂಧಿಸಿ ಶಂಕಿತ ಅಪ್ರಾಪ್ತ ವಯಸ್ಕ, ಏಳನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ಒಬ್ಬ ಭದ್ರತಾ ಸಿಬ್ಬಂದಿ ಮತ್ತು ಎಂಟು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಓರ್ವ ಶಿಕ್ಷಕ ಮತ್ತು ಮೂವರು ಮಕ್ಕಳು ಬೆಲ್ಗ್ರೇಡ್ನ ತುರ್ತು ವೈದ್ಯಕೀಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಮೂರು ಮಕ್ಕಳು ಮಕ್ಕಳ ಆಸ್ಪತ್ರೆಯಲ್ಲಿದ್ದಾರೆ.